×
Ad

ಮೈಸೂರು: ಜು.5 ರಿಂದ ಅರಮನೆ, ಮೃಗಾಲಯ ಮತ್ತು ಕಾರಂಜಿ ಕೆರೆ ಸಾರ್ವಜನಿಕ ವೀಕ್ಷಣೆಗೆ ಅವಕಾಶ

Update: 2021-07-04 18:48 IST
ಸಾಂದರ್ಭಿಕ ಚಿತ್ರ

ಮೈಸೂರು,ಜು.4: ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಜು.5 ರಿಂದ ಮೈಸೂರು ಮೃಗಾಲಯ, ಅರಮನೆ ಮತ್ತು ಕಾರಂಜಿ ಕೆರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಚಾಮರಾಜೇಂದ್ರ ಮೃಗಾಲಯವು, ಕೋವಿಡ್ ಕಾರಣದಿಂದಾಗಿ ಮೃಗಾಲಯ ಹಾಗೂ ಕಾರಂಜಿ ಕೆರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈಗ ಅನ್‍ಲಾಕ್ ಘೋಷಿಸಲಾಗಿದ್ದು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.

ಅರಮನೆಗೆ ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಪ್ರವಾಸಿಗರು ಆನ್‍ಲೈನ್ ಮೂಲಕವೂ ಟಿಕೆಟ್ ಬುಕಿಂಗ್ ಮಾಡಬಹುದು. ವೀಕ್ಷಣೆಗೆ ಬರುವ ಎಲ್ಲರಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಹಾಕಲಾಗುವುದು ಎಂದು ಅರಮನೆ ಮಂಡಳಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News