×
Ad

ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ರಾಜ್ಯಕ್ಕೆ ನೀಡಿ: ಸಿದ್ದರಾಮಯ್ಯ

Update: 2021-07-04 19:18 IST

ಬೆಂಗಳೂರು, ಜು. 4: `ರಾಜ್ಯದಲ್ಲಿ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ರಾಜ್ಯಕ್ಕೆ ನೀಡಲು ಅಗತ್ಯವಾಗಿರುವ ಸಂವಿಧಾನದ 102ನೆ ತಿದ್ದುಪಡಿಗೆ ತಿದ್ದುಪಡಿ ಮಾಡಲು ಕೇಂದ್ರ ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನೆಪದಲ್ಲಿ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಹುನ್ನಾರ ನಡೆಸಿದ್ದನ್ನು ಕೇಂದ್ರ ಸರಕಾರ ಈಗಲಾದರೂ ಒಪ್ಪಿಕೊಳ್ಳಬೇಕು. ರಾಜ್ಯದಲ್ಲಿ ಹಿಂದುಳಿದ ಜಾತಿಗಳನ್ನು ರಾಷ್ಟ್ರೀಯ ಹಿಂದುಳಿದ ಜಾತಿಗಳ ಆಯೋಗದ ಶಿಫಾರಸಿನಂತೆ ಗುರುತಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುವ ಸಂವಿಧಾನದ ತಿದ್ದುಪಡಿಯನ್ನು ಪ್ರಾರಂಭದಿಂದಲೇ ನಾವು ವಿರೋಧಿಸುತ್ತಾ ಬಂದಿದ್ದೇವೆ' ಎಂದು ತಿಳಿಸಿದ್ದಾರೆ.

`ರಾಜ್ಯದ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರಕಾರಕ್ಕೆ ನೀಡಲು ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ' ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News