ಅನ್‍ಲಾಕ್ 3.0: ನಿಯಮ ಉಲ್ಲಂಘಿಸಿದರೆ ದಂಡ; ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ

Update: 2021-07-04 15:45 GMT

ಬೆಂಗಳೂರು, ಜು.4: ರಾಜ್ಯಾದ್ಯಂತ ಜು.5ರಿಂದ ಅನ್‍ಲಾಕ್ 3.0 ಜಾರಿಗೆ ಬರಲಿದೆ. ಬೆಂಗಳೂರು ನಗರ ಸೇರಿ ಇತರ ಕಡೆಗಳಲ್ಲಿ ರಾತ್ರಿ 9 ಗಂಟೆಯ ವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಡಿರಲು ಅವಕಾಶ ನೀಡಲಾಗಿದೆ. ಆದರೆ, ಅನ್‍ಲಾಕ್ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದರೆ ದಂಡ ವಸೂಲಿ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರಕಾರದ ಮಾರ್ಗಸೂಚಿಗಳ ಪ್ರಕಾರ ಕೋವಿಡ್ ಅನ್‍ಲಾಕ್ ಸೋಮವಾರದಿಂದ ಜಾರಿಗೊಳಿಸಲಾಗುತ್ತಿದೆ. ಹೊಸ ಮಾರ್ಗಸೂಚಿಗಳು ಜು.5ರ ಬೆಳಗ್ಗೆ 6 ರಿಂದ ಜಾರಿಗೆ ಬರಲಿದ್ದು, ಜು.19ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಈ ನಿಟ್ಟಿನಲ್ಲಿ ಬಿಬಿಎಂಪಿ ಮಾರ್ಷಲ್ಸ್ ಮತ್ತು ಒಟ್ಟು 54 ವಿಶೇಷ ತಂಡಗಳನ್ನು ರಚಿಸಲಾಗಿದೆ. ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸುವ ವ್ಯಕ್ತಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮೇಲೆ ದಂಡ ವಿಧಿಸಲು ಮತ್ತು ಪ್ರಕರಣಗಳನ್ನು ದಾಖಲಿಸಲು ನಗರದಾದ್ಯಂತ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದಿದ್ದಾರೆ.

ನಮ್ಮ ಸುರಕ್ಷತೆಗಾಗಿ ಕೋವಿಡ್ 19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ. ನೆನಪಿಡಿ, ಪ್ರಕರಣಗಳು ಕಡಿಮೆಯಾಗಿವೆ, ಆದರೆ ವೈರಸ್ ಇನ್ನೂ ಇದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News