×
Ad

ದ.ಕ.ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ : ಡಿಸಿ ಡಾ. ರಾಜೇಂದ್ರ

Update: 2021-07-04 21:33 IST

ಮಂಗಳೂರು, ಜು.4: ದ.ಕ. ಜಿಲ್ಲೆಯಲ್ಲಿ ಜು.5ರಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದರೂ ಕೂಡ ರಾತ್ರಿ 9 ಗಂಟೆಯ ಬಳಿಕ ಕರ್ಫ್ಯೂ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.

ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೂಡ ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವ ಕಾರಣಕ್ಕೂ ನಿರ್ಲಕ್ಷ ಮಾಡಬಾರದು. ಕೋವಿಡ್ 19 ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶವಿಲ್ಲ. ಅಲ್ಲದೆ ಯಾವುದೇ ಸಾಮಾಜಿಕ, ರಾಜಕೀಯ, ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಲಿಗೆ ಅವಕಾಶವಿಲ್ಲ. ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಖಾಸಗಿ ಕಚೇರಿಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News