×
Ad

ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ: ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

Update: 2021-07-04 21:33 IST

ಬೆಂಗಳೂರು, ಜು.4: ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ  ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಅಲ್ಲದೆ, ಜು.7 ಮತ್ತು 8ರಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.   

ರವಿವಾರ ನಗರದ ಯಶವಂತಪುರ, ಶಿವಾಜಿನಗರ, ಕಲಾಸಿಪಾಳ್ಯ, ಹೆಬ್ಬಾಳ, ಬೊಮ್ಮನಹಳ್ಳಿ, ಮಲ್ಲೇಶ್ವರಂ ಸೇರಿ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಈ ಮಳೆ ಇನ್ನು ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರವಿವಾರ ನಗರದಲ್ಲಿ ಮಧ್ಯಾಹ್ನದವರೆಗೂ ಬಿಸಿಲು ಹಾಗೂ ಕೆಲ ಬಾರಿ ಮೋಡ ಕವಿದ ವಾತಾವರಣವಿದ್ದರೂ ಸಂಜೆ ವೇಳೆ ಧಾರಾಕಾರ ಮಳೆ ಸುರಿಯಿತು.  ಜು.7 ಮತ್ತು 8ರಂದು ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News