ಮಂಗಳೂರು: ಗ್ಯಾರೇಜ್ ಮಾಲಕರ ಸಂಘದಿಂದ ಲಸಿಕೆ
Update: 2021-07-04 22:19 IST
ಮಂಗಳೂರು, ಜು.4: ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ವತಿಯಿಂದ ಮೆಕ್ಯಾನಿಕ್‌ಗಳಿಗೆ ಮತ್ತವರ ಕುಟುಂಬಕ್ಕೆ ಲಸಿಕೆ ವಿತರಣಾ ಕಾರ್ಯಕ್ರಮವು ಶನಿವಾರ ನಡೆಯಿತು.
ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಮಿಲ, ಅಧ್ಯಕ್ಷ ಜನಾರ್ದನ್, ಕಾರ್ಪೋರೇಟರ್ ಶೈಲೇಶ್, ಡಾ. ರೆಹನಾ ಮತ್ತಿತರರು ಉಪಸ್ಥಿತರಿದ್ದರು.
ಕೃಷ್ಣ ಶ್ರೀಯಾನ್ ವಂದಿಸಿದರು. ರಾಮಚಂದ್ರ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು.