ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದ ಅಂತಿಮ ತನಿಖಾ ವರದಿ ಸಿದ್ಧವಿದೆ: ಹೈಕೋರ್ಟ್ ಗೆ ಸರಕಾರದ ಮಾಹಿತಿ

Update: 2021-07-05 13:42 GMT

ಬೆಂಗಳೂರು, ಜು.5: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ. 

ಸೀಡಿ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜು.14ರೊಳಗೆ ತನಿಖೆಯ ಅಂತಿಮ ವರದಿ ಸಲ್ಲಿಸುವಂತೆ ಎಸ್‍ಐಟಿ ಪರ ವಕೀಲರಿಗೆ ಸೂಚನೆ ನೀಡಿತು. ಇದೇ ವೇಳೆ ಎಸ್‍ಐಟಿಯಿಂದ ನ್ಯಾಯಪೀಠಕ್ಕೆ ಮೆಮೋ ಸಲ್ಲಿಕೆಯಾಯಿತು.

ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿತು. ಜತೆಗೆ ವಿಚಾರಣೆಯನ್ನು ಜು.14ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ರಮೇಶ್ ಜಾರಕಿಹೊಳಿ ಸೀಡಿ ಬಹಿರಂಗ ಪ್ರಕರಣದ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವಾಗಲೇ ಸಚಿವರಾದ ಮಾಧುಸ್ವಾಮಿ ಮತ್ತು ಸುಧಾಕರ್ ಅವರು ಇದು ಲೈಂಗಿಕ ದೌರ್ಜನ್ಯ ಕೇಸ್ ಅಲ್ಲವೆಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ತನಿಖೆಯಲ್ಲಿ ಹಸ್ತಕ್ಷೇಪದ ಯತ್ನವೆಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News