ಬೂದುಪಟ್ಟಿಯಿಂದ ಹೊರಬರಲು ಪಾಕಿಸ್ತಾನದ ಪ್ರಯತ್ನ: ಉಗ್ರರಿಗೆ ಆರ್ಥಿಕ ನೆರವು ತಡೆಯುವ ಘಟಕ ರಚನೆ

Update: 2021-07-05 16:47 GMT

ಇಸ್ಲಮಾಬಾದ್, ಜು.4: ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್)ನ ಬೂದುಪಟ್ಟಿಯಿಂದ ಹೊರಬರಲು ಹೆಣಗಾಡುತ್ತಿರುವ ಪಾಕಿಸ್ತಾನ, ಅಕ್ರಮ ಹಣ ವರ್ಗಾವಣೆ ಮತ್ತು ಉಗ್ರರಿಗೆ ಆರ್ಥಿಕ ನೆರವು ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ಘಟಕವೊಂದನ್ನು ಸ್ಥಾಪಿಸಿರುವುದಾಗಿ ಮೂಲಗಳು ಹೇಳಿವೆ. ‌

ಅಕ್ರಮ ಹಣ ವರ್ಗಾವಣೆ ಹಾಗೂ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ಒದಗಿಸುವುದನ್ನು ವಿರೋಧಿಸುವ , ಪ್ಯಾರಿಸ್ ಮೂಲದ ಎಫ್ಎಟಿಎಫ್ 2018ರ ಜೂನ್ನಲ್ಲಿ ಪಾಕಿಸ್ತಾನವನ್ನು ಬೂದುಪಟ್ಟಿಯಲ್ಲಿ ಇರಿಸಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಉಗ್ರರಿಗೆ ಆರ್ಥಿಕ ನೆರವು ಒದಗಿಸುವುದನ್ನು ತಡೆಯುವ ನಿಟ್ಟಿನಲ್ಲಿ 2019ರ ಅಂತ್ಯದೊಳಗೆ ಕಾರ್ಯಕ್ರಮ ಅನುಷ್ಟಾನಗೊಳಿಸುವಂತೆ ಪಾಕ್ ಸರಕಾರಕ್ಕೆ ಸೂಚಿಸಲಾಗಿತ್ತು. 

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಈ ಗಡುವನ್ನು ವಿಸ್ತರಿಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ಮತ್ತು ಉಗ್ರರಿಗೆ ಆರ್ಥಿಕ ನೆರವು ಪೂರೈಕೆ ತಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಬೂದು ಪಟ್ಟಿಯಲ್ಲೇ ಉಳಿಯಲಿದೆ ಎಂದು ಕಳೆದ ತಿಂಗಳು ಎಫ್ಎಟಿಎಫ್ ಘೋಷಿಸಿತ್ತು ಮತ್ತು ಹಫೀಝ್ ಸಯೀದ್, ಮಸೂದ್ ಅಝರ್ ಸಹಿತ ವಿಶ್ವಸಂಸ್ಥೆ ಗೊತ್ತುಪಡಿಸಿದ ಉಗ್ರಸಂಘಟನೆಯ ಮುಖಂಡರನ್ನು ತನಿಖೆಗೆ ಒಳಪಡಿಸಿ ಕಾನೂನುಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News