ಬೆಂಗಳೂರು: ಸರಗಳ್ಳತನ; ಆರೋಪಿಗಳ ಬಂಧನ

Update: 2021-07-06 13:26 GMT

ಬೆಂಗಳೂರು, ಜು.6: ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದ ಆರೋಪ ಪ್ರಕರಣ ಸಂಬಂಧ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.​

ಬಂಧಿತ ಆರೋಪಿಗಳಿಬ್ಬರು ಸೋಮವಾರ ಬೆಳಗ್ಗೆ ಬೆಮೆಲ್ ಲೇಔಟ್‍ನ ವಿವೇಕಾನಂದ ಪಾರ್ಕ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಇನ್‍ಸ್ಪೆಕ್ಟರ್ ಶಿವಣ್ಣ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಸಂಜೆಯೇ ಆರೋಪಿಗಳನ್ನು ಬಂಧಿಸಿ ಚಿನ್ನದ ಸರ, ಬೈಕ್‍ನ್ನು ಜಪ್ತಿ ಮಾಡಿದ್ದಾರೆ ಎಂದು ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News