ವಿಕಲಚೇತನರಿಗೆ ಟ್ರೈಸ್ಕೂಟರ್ ಸೌಲಭ್ಯ: ಅರ್ಜಿ ಆಹ್ವಾನ
Update: 2021-07-06 22:50 IST
ಉಡುಪಿ, ಜು.6: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಾರ್ಷಿಕ 2.50 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿ ರುವ ವಿಕಲಚೇತನ ಫಲಾನುಭವಿಗಳಿಗೆ ಪ್ರಸಕ್ತ ಸಾಲಿನಲ್ಲಿ ಶೇ. 5ರ ನಿಧಿಯಡಿ ಟ್ರೈಸ್ಕೂಟರ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.