×
Ad

ಪಾವಂಜೆ: ಬೈಕ್ ಢಿಕ್ಕಿ; ಪಾದಾಚಾರಿ ಮೃತ್ಯು

Update: 2021-07-06 23:12 IST

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ  ಪಾವಂಜೆ ಜಂಕ್ಷನ್ ಬಳಿ ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಪಾವಂಜೆ ದಾರೆ ತೋಟ ಬಳಿಯ ನಿವಾಸಿ ವಿಜಯ್ ದೇವಾಡಿಗ (42) ಎಂದು ಗುರುತಿಸಲಾಗಿದೆ.

ವಿಜಯ್ ಅವರು ಬಸ್ಸಿನಿಂದ ಇಳಿದು ಹೆದ್ದಾರಿ ದಾಟುತ್ತಿದ್ದಾಗ ಮಂಗಳೂರು ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿರುವ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ವಿಜಯ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೈಕ್ ಸವಾರ ಹಾಗೂ ಸಹಸವಾರರಾದ ಅಭಿಷೇಕ್ ಹಾಗೂ ಲೋಕೇಶ್ ಗಂಭೀರ ಗಾಯಗೊಂಡಿದ್ದು, ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮನೆಗೆ ಆಸರೆಯಾಗಿದ್ದ ವಿಜಯ್ ದೇವಾಡಿಗ ತನ್ನ ತಾಯಿ ಮತ್ತು ಅಕ್ಕನನ್ನು ಅಗಲಿದ್ದಾರೆ.

ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News