ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ನಿಧನ

Update: 2021-07-08 12:32 GMT

ಬೆಂಗಳೂರು, ಜು.8: ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ(80) ಅವರು ಇಂದು ನಿಧನರಾಗಿದ್ದಾರೆ. ಇವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೇ ತಿಂಗಳಲ್ಲಿ ದುನಿಯಾ ವಿಜಯ್‌ ಅವರ ತಂದೆ ಹಾಗೂ ತಾಯಿ ಇಬ್ಬರಿಗೂ ಕೊರೋನ ಸೋಂಕು ತಗುಲಿತ್ತು. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳಲ್ಲಿ ಇಬ್ಬರೂ ಗುಖಮುಖರಾಗಿದ್ದರು. ಆದರೆ ನಾರಾಯಣಮ್ಮ ಅವರಿಗೆ ಜೂನ್‌ನಲ್ಲಿ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ ಕಳೆದ ಕೆಲ ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. 

ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಹೀಗಾಗಿ ಕಳೆದ 20 ದಿನಗಳಿಂದ ದಿನನಿತ್ಯ ವೈದ್ಯರು ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 

ಈ ಕುರಿತು ಸ್ವತಃ ವಿಜಯ್‌ ಅವರೇ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು, ‘ಅಮ್ಮ ಮತ್ತೆ ಹುಟ್ಟಿ ಬಾ’ ಎಂದು ಬರೆದು, ಅಮ್ಮನ ಜೊತೆಗಿರುವ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News