ದ.ಕ. ಜಿಲ್ಲೆ: ಕೋವಿಡ್‌ಗೆ 8 ಬಲಿ; 210 ಮಂದಿಗೆ ಕೊರೋನ ಪಾಸಿಟಿವ್

Update: 2021-07-08 16:22 GMT

ಮಂಗಳೂರು, ಜು.8: ದ.ಕ.ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಸಾವಿನ ಸಂಖ್ಯೆ ಮತ್ತು ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಗುರುವಾರ ಕೋವಿಡ್‌ಗೆ 8 ಮಂದಿ ಬಲಿಯಾಗಿದ್ದರೆ, 210 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.3.31ರಿಂದ 2.59ಕ್ಕೆ ಇಳಿಕೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,290ಕ್ಕೇರಿದ್ದರೆ, ಕೊರೋನ ಸೋಂಕಿಗೊಳಗಾದವರ ಸಂಖ್ಯೆ 94,802ಕ್ಕೇರಿದೆ. ಅಲ್ಲದೆ 412 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 90,932ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 2,580 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 11,07,627 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 10,12,825 ಮಂದಿಯ ವರದಿ ನೆಗೆಟಿವ್ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News