×
Ad

ಸ್ಟ್ಯಾನ್ ಸ್ವಾಮಿ ಮರಣವು ಪ್ರಜಾಪ್ರಭುತ್ವದ ಕಗ್ಗೊಲೆ: ಎಸ್‌ಡಿಪಿಐ ಪ್ರತಿಭಟನೆ

Update: 2021-07-08 22:12 IST

ಮಂಗಳೂರು, ಜು.8: ಜೈಲು ಸೇರಿದ್ದ ಮಾನವ ಹಕ್ಕುಗಳ ಹೋರಾಟಗಾರ ಫಾ. ಸ್ಟಾನ್ ಸ್ವಾಮಿಯ ನಿಧನ ಖಂಡಿಸಿ ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಗುರುವಾರ ರಾತ್ರಿ ಮೊಂಬತ್ತಿ ಪ್ರತಿಭಟನೆ ನಡೆಯಿತು.

ಬುಡಕಟ್ಟು ಜನಾಂಗದ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಾನವಹಕ್ಕು ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿಯ ಮರಣವು ಪ್ರಸಕ್ತ ದೇಶದಲ್ಲಿ ಆಡಳಿತ ನಡೆಸುತ್ತಿರುವ ಫ್ಯಾಸಿಸ್ಟ್ ಸರಕಾರದ ಅಮಾನವೀಯ ಕ್ರೌರ್ಯದಿಂದ ಸಂಭವಿಸಿದೆ. ಸರಕಾರದ ಇಂತಹ ಪೈಶಾಚಿಕ ಕೃತ್ಯದ ವಿರುದ್ಧ ಹೋರಾಟ ಮಾಡಬೇಕಿದೆ. ಸ್ಟ್ಯಾನ್ ಸ್ವಾಮಿ ಮರಣವು ಕೇವಲ ಮರಣವಲ್ಲ, ಅದೊಂದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ ಸ್ಟಾನ್ ಸ್ವಾಮಿಯ ಕಸ್ಟಡಿ ಸಾವಿನ ವಿರುದ್ಧ ಧ್ವನಿ ಎತ್ತದಿದ್ದರೆ ಮತ್ತಷ್ಟು ಹೋರಾಟಗಾರರನ್ನು ಸರಕಾರದ ಸಾಂಸ್ಥಿಕವಾಗಿ ಹತ್ಯೆ ಮಾಡುವ ಸಾಧ್ಯತೆ ಇದೆ. ಈಗಾಗಲೆ ಮೋದಿ ಸರಕಾರದ ದುರಾಡಳಿತದ ವಿರುದ್ಧ ಧ್ವನಿ ಎತ್ತುವವರನ್ನು ಆಡಳಿತ ವ್ಯವಸ್ಥೆಯು ದೇಶದ್ರೋಹದ ಪ್ರಕರಣ ದಾಖಲಿಸಿ ಹಿಂಸಿಸುತ್ತಿದೆ. ಇದು ಖಂಡನೀಯ. ಇದರ ವಿರುದ್ಧ ನಿರಂತರ ಹೋರಾಟ ಮಾಡಬೇಕಿದೆ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಅಥಾವುಲ್ಲ ಜೋಕಟ್ಟೆ, ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ಮುಖಂಡರಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಲ್ಯಾನ್ಸಿ ಥಾರಸ್, ಅಕ್ಬರ್ ಕುದ್ರೋಳಿ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News