×
Ad

ಬೆಂಗಳೂರು; ಮಾದಕ ವಸ್ತು ಮಾರಾಟ ಪ್ರಕರಣ : 28 ಕೆಜಿ ಗಾಂಜಾ ವಶ

Update: 2021-07-09 15:22 IST

ಬೆಂಗಳೂರು, ಜು.9: ಡ್ರಗ್ಸ್ ಸರಬರಾಜು ಹಾಗೂ ಮಾರಾಟದ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ವಿದೇಶಿ ಪ್ರಜೆ ಸೇರಿ 6 ಮಂದಿಯನ್ನು ಬಂಧಿಸಿ 28 ಕೆಜಿ ಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ನೈಜೀರಿಯನ್ ಪ್ರಜೆ, ಆಂಧ್ರದ ಇಬ್ಬರು, ನಗರದ ಮೂವರು ಸೇರಿ ಆರು ಮಂದಿ ಆರೋಪಿಗಳಿಂದ 15 ಲಕ್ಷ  ರೂ. ಬೆಲೆಯ 28 ಕೆಜಿ ಗಾಂಜಾ, 8 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ತಿಳಿಸಿದ್ದಾರೆ.

ಆರೋಪಿಗಳು ಆಂಧ್ರದ ವಿಶಾಖಪಟ್ಟಣದಿಂದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿಕೊಂಡು ಬಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ. ಆರೋಪಿಗಳ ಜತೆ ಇನ್ನೂ ಮೂವರು ಭಾಗಿಯಾಗಿ ತಲೆ ಮರೆಸಿಕೊಂಡಿದ್ದು ಅವರ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೆಆರ್‌ಪುರಂ ಬಳಿ ಆರೋಪಿಗಳು ಪ್ರತ್ಯೇಕ ತಂಡ ರಚಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News