ಆಂಬ್ಯುಲೆನ್ಸ್ ಢಿಕ್ಕಿ: ಸ್ಕೂಟರ್ ಸವಾರ ಗಂಭೀರ ಗಾಯ
Update: 2021-07-09 18:14 IST
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬ ಗ್ರಾಮದ ಆನೆಕೆರೆ ಶ್ರೀಕೃಷ್ಣ ದೇವಸ್ಥಾನದ ಬಳಿ ಹಾದು ಹೋಗುವ ಪುಲ್ಕೇರಿ-ಬಂಗ್ಲೆಗುಡ್ಡೆ ರಾಜ್ಯ ಹೆದ್ದಾರಿಯಲ್ಲಿ ಅಂಬ್ಯುಲೆನ್ಸ್ ವಾಹನವೊಂದು, ಅತಿವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದು, ಕುಂಟಲ್ಪಾಡಿ ಕಡೆಯಿಂದ ಆನೆಕೆರೆ ಕಡೆಗೆ ಹೋಗಲು ರಸ್ತೆಯನ್ನು ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ದ್ವಿಚಕ್ರ ಸವಾರ ಮುಂಡ್ಕೂರು ಗ್ರಾಮದ ಸಂಕಲಕರಿಯ ನಿವಾಸಿ ಶೇಖರ ಮೂಲ್ಯ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಡಾಮರು ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನ ಕೂಡ ಜಖಂಗೊಂಡಿರುತ್ತದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.