×
Ad

ಶೋಭಾ ಕರಂದ್ಲಾಜೆಗೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

Update: 2021-07-09 19:34 IST

ಉಡುಪಿ, ಜು.9: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಜೀವನ ಪ್ರಾರಂಭಿಸಿ, ಸುಮಾರು 25 ವರ್ಷಕ್ಕೂ ಮಿಕ್ಕಿದ ರಾಜಕೀಯ ಕ್ಷೇತ್ರದ ಅನುಭವದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದ ನೂತನ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆಯಾಗಿ ನೇಮಕ ಗೊಂಡಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ಅಭಿನಂದಿಸಿದೆ.

ಶೋಭಾ ಸಚಿವೆಯಾಗಿರುವುದು ನಮಗೆ ಅತೀವ ಸಂತಸ ತಂದಿದೆ. ಇದು ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಸಂದ ಗೌರವ. ತಾನು ವಹಿಸಿ ಕೊಂಡ ಜವಾಬ್ದಾರಿಯನ್ನು ಬದ್ಧತೆ ಮತ್ತು ನಿಷ್ಠೆಯಿಂದ ನಿಭಾಯಿಸಿಕೊಂಡು ಬಂದಿರುವ ಶೋಭಾ ಕರಂದ್ಲಾಜೆ, ನೂತನ ಕೇಂದ್ರ ಸಚಿವೆ ಜವಾಬ್ದಾರಿಯನ್ನೂ ಸಮರ್ಥವಾಗಿ ನಿರ್ವಹಿಸುತ್ತಾರೆಂಬ ವಿಶ್ವಾಸ ನಮಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಮೋದಿ ಸಂಪುಟದ ಒಟ್ಟು 43 ನೂತನ ಸಚಿವರಲ್ಲಿ 36 ಹೊಸ ಮುಖಗಳಿಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಶೋಭಾ ಕರಂದ್ಲಾಜೆ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಎ.ನಾರಾಯಣ ಸ್ವಾಮಿ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿ ಜವಾಬ್ದಾರಿ ಸ್ವೀಕರಿಸಿರುವ ಭಗವಂತ ಖೂಬ ಸೇರಿ ಕರ್ನಾಟಕದ ಈ ಎಲ್ಲಾ ನಾಲ್ಕು ನೂತನ ಕೇಂದ್ರ ಸಚಿವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಾರ್ದಿಕ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News