ಕೊಡಗು: ಜುಲೈ 19ರವರೆಗೆ ಕೋವಿಡ್ ಅನ್‍ಲಾಕ್ ನಿಯಮಾವಳಿ ಜಾರಿ

Update: 2021-07-09 15:23 GMT

ಮಡಿಕೇರಿ ಜು.9 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅನ್‍ಲಾಕ್ ನಿಯಮಾವಳಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜು.19 ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕಂಟೈನ್‍ಮೆಂಟ್ ವಲಯದಲ್ಲಿ ಯಾವುದೇ ಚಟುವಟಿಕೆಗಳು ಇರುವುದಿಲ್ಲ. ಕಂಟೈನ್‍ಮೆಂಟ್ ವಲಯದ ಹೊರಭಾಗದಲ್ಲಿ ಈ ಚಟುವಟಿಕೆಗಳನ್ನು ಹೊರತುಪಡಿಸಿ, ಉಳಿದ ಚಟುವಟಿಕೆಗಳಿಗೆ ಅನುಮತಿಸಿದೆ. 

 ಥಿಯೇಟರ್ / ಸಿನೆಮಾ ಹಾಲ್ ಮತ್ತು ಪಬ್‍ಗಳು, ಸ್ವಿಮ್ಮಿಂಗ್ ಪೂಲ್‍ಗಳಲ್ಲಿ ಸ್ಪರ್ಧಾತ್ಮಕ ಉದ್ದೇಶದ ತರಬೇತಿಗೆ ಮಾತ್ರ ಅವಕಾಶ ಇರುತ್ತದೆ. ಈ ಸಂಬಂಧ ಕೋವಿಡ್ ಸಮುಚಿತ ವರ್ತನೆ ಹಾಗೂ ಸಂಬಂಧಪಟ್ಟ ಇಲಾಖೆಯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ತರಬೇತಿ ಉದ್ದೇಶಕ್ಕಾಗಿ ಮಾತ್ರ ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂಗಳನ್ನು ತೆರೆಯಬಹುದಾಗಿದೆ. ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ. ಈ ಸಂಬಂಧ ಕೋವಿಡ್ ಸಮುಚಿತ ವರ್ತನೆ ಹಾಗೂ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 

ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಸಮಾರಂಭಗಳು, ಗುಂಪುಗೂಡುವಿಕೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡುವಿಕೆಗಳು. ಕೋವಿಡ್–19 ಸಮುಚಿತ ವರ್ತನೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಸರ್ಕಾರದ ಮಾರ್ಗಸೂಚಿಗೊಳಪಟ್ಟು ಗರಿಷ್ಠ 100 ಮಂದಿ ಮೀರದಂತೆ ಮದುವೆ, ಕೌಟುಂಬಿಕ ಸಮಾರಂಭಗಳನ್ನು ನಡೆಸಬಹುದು. 

ಕೋವಿಡ್–19 ಸಮುಚಿತ ವರ್ತನೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಸರ್ಕಾರದ ಮಾರ್ಗಸೂಚಿಗೊಳಪಟ್ಟು ಗರಿಷ್ಠ 20 ಮಂದಿ ಮೀರದಂತೆ ಅಂತ್ಯಕ್ರಿಯೆ / ಶವಸಂಸ್ಕಾರ ನಡೆಸಬಹುದು. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ. ಸೇವೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಲ್ಲಿ ಆಸನ ಸಾಮಥ್ರ್ಯಕ್ಕೆ ಅನುಗುಣವಾಗಿ ಕಾರ್ಯಾಚರಿಸಲು ಅನುಮತಿಸಿದೆ. 
ಎಲ್ಲಾ ಅಂಗಡಿ, ರೆಸ್ಟೋರೆಂಟ್, ಮಾಲ್, ಖಾಸಗಿ ಕಚೇರಿಗಳು ಮುಂತಾದವುಗಳು ಕೋವಿಡ್–19 ಸಮುಚಿತ ವರ್ತನೆ ಪಾಲಿಸುತ್ತಾ ಕಾರ್ಯಾಚರಿಸುವುದು. ಉಲ್ಲಂಘನೆಯು ಡಿಸಾಸ್ಟರ್ ಮಾನೇಜ್ ಮೆಂಟ್ ಕಾಯ್ದೆಯಡಿ ದಂಡನೀಯವಾಗಿರುತ್ತದೆ. ಎಲ್ಲಾ ಶೈಕ್ಷಣಿಕ ಸಂಸ್ಥೆಗಳು / ಟ್ಯುಟೋರಿಯಲ್ಸ್ ದಿನ/ ಕಾಲೇಜುಗಳು ಸರ್ಕಾರದ ಮುಂದಿನ ಆದೇಶದವರಗೆ ಮುಚ್ಚಲ್ಪಟ್ಟಿರುತ್ತದೆ. 

ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ತುರ್ತು, ವೈದ್ಯಕೀಯ, ಸರಕು ಸಾಗಾಣಿಕೆ, ಅತ್ಯವಶ್ಯಕ ಸೇವೆಗಳನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. 

ಸಾರ್ವಜನಿಕರು ವಿನಾ ಕಾರಣ ತಿರುಗಾಡುವುದನ್ನು ನಿಷೇಧಿಸಿದೆ. ಕರ್ತವ್ಯದ ನಿಮಿತ್ತ ಸಂಚರಿಸುವವರು ಆಯಾಯ ಇಲಾಖೆ / ಸಂಸ್ಥೆ / ಕಚೇರಿಯಿಂದ ನೀಡಿದ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಬಸ್‍ಗಳ ಸಂಚಾರ ಇರುತ್ತದೆ. ವಿಮಾನ ನಿಲ್ದಾಣ, ರೈಲ್ವೆ, ಬಸ್ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು ಹಾಗೂ ಕರೆದೊಯ್ಯಲು ಅವಕಾಶ ಇರುತ್ತದೆ. ಆದರೆ, ಸಂಚಾರದ ವೇಳೆ ಅಧಿಕೃತ ದಾಖಲೆ, ಟಿಕೆಟ್ ಹೊಂದಿತಕ್ಕದ್ದು. ಸಾರ್ವಜನಿಕ ಸ್ಥಳ, ಸಾರಿಗೆ ವ್ಯವಸ್ಥೆಗಳಲ್ಲಿ ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. ಈ ಆದೇಶದ ದುರುಪಯೋಗ ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News