ಬೆಂಗಳೂರು: ಮೊಬೈಲ್ ಕಳವು ಪ್ರಕರಣ: ಇಬ್ಬರ ಬಂಧನ

Update: 2021-07-09 18:40 GMT

ಬೆಂಗಳೂರು, ಜು.9: ಬೈಕ್‍ನಲ್ಲಿ ಬಂದು ಮೊಬೈಲ್ ಕಳವು ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಲೋಕೇಶ್ ಮತ್ತು ಚೇತನ್ ಬಂಧಿತರಾಗಿದ್ದು, 1 ಲಕ್ಷ ರೂ. ಮೌಲ್ಯದ ಐದು ಮೊಬೈಲ್ ಮತ್ತು ಎರಡು ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವ್ಯಕ್ತಿಯೊಬ್ಬರು ಜು.3ರಂದು ಇಲ್ಲಿನ ಮನೆಯ ಬಳಿ ಸೈಕಲ್‍ನಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು, ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News