ಕಾರ್ಕಳ ಎಸ್ಸೈ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ
Update: 2021-07-10 12:52 IST
ಕಾರ್ಕಳ, ಜು.10: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಹಿರ್ಗಾನ ಮೇಲೆ ಕಾರ್ಕಳ ನಗರ ಠಾಣೆ ಎಸ್ಸೈ ಮಧು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅವರ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾರ್ಕಳ ಬಂಡೀಮಠ ಬಸ್ ನಿಲ್ದಾಣದಲ್ಲಿ ಶನಿವಾರ ಧರಣಿ ನಡೆಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗಿಶ್ ಇನ್ನಾ, ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್, ಪುರಸಭಾ ಸದಸ್ಯ ಶುಭದ ರಾವ್ ಕಾರ್ಕಳ, ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಮತ್ತಿತರರು ಮಾತನಾಡಿದರು.