ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಆಪ್ತ ಸೋಮು ನ್ಯಾಮಗೌಡಗೆ ನ್ಯಾಯಾಂಗ ಬಂಧನ

Update: 2021-07-10 13:41 GMT

ಧಾರವಾಡ, ಜು.10: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ಅವರಿಗೆ ನಗರದ ಜನಪ್ರತಿನಿಧಿಗಳ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಈಗಾಗಲೇ ಹಲವು ಬಾರಿ ಸೋಮು ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಗುರುವಾರ ಬೆಳಗ್ಗೆ ಗದಗದಲ್ಲಿ ನ್ಯಾಮಗೌಡ ಅವರನ್ನು ವಶಕ್ಕೆ ತೆಗೆದುಕೊಂಡು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಬಳಿಕ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಮಾಡಲಾಗಿತ್ತು. ನ್ಯಾಯಾಲಯ ಸೋಮು ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈಗಾಗಲೇ ವಿನಯ್ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕರಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News