ಜು.12: ವನಮಹೋತ್ಸವ
Update: 2021-07-10 19:39 IST
ಮಂಗಳೂರು, ಜು.10:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯ ಕ್ರಮವು ಜು.12ರಂದು ಬೆಳಗ್ಗೆ 10 ಗಂಟೆಗೆ ಲೇಡಿ ಹಿಲ್ನ ಪತ್ರಿಕಾಭವನದ ಬಳಿ ನಡೆಯಲಿದೆ.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ, ಮಂಗಳೂರು ವಲಯ ಅರಣ್ಯಾಧಿ ಕಾರಿ ಪಿ.ಶ್ರೀಧರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.