×
Ad

ಗುರುಪುರ: ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಬಿಜೆಪಿಗೆ ಸೇರ್ಪಡೆ

Update: 2021-07-10 19:40 IST

ಮಂಗಳೂರು, ಜು.10: ಗುರುಪುರ ಗ್ರಾಪಂನ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಜಿ.ಎಂ. ಉದಯ ಭಟ್ ಮತ್ತು ಸಚಿನ್ ಅಡಪ ಬೆಂಬಲಿಗರೊಂದಿಗೆ ಶನಿವಾರ ನಗರದ ಸಂಘನಿಕೇತನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮಂಗಳೂರು ನಗರ ಉತ್ತರ ಬಿಜೆಪಿ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಮತ್ತಿತರರು ಪಾಲ್ಗೊಂಡಿದ್ದರು.

ಹಿಂದಿನ ಸಾಲಿನಲ್ಲಿ ಗುರುಪುರ ಗ್ರಾಪಂ ಉಪಾಧ್ಯಕ್ಷರಾಗಿದ್ದ ಜಿ.ಎಂ. ಉದಯ ಭಟ್ ಹಾಲಿ ಸದಸ್ಯರಾಗಿದ್ದಾರೆ. ತಾಲೂಕು ಪಂಚಾಯತ್‌ನ ನಿಕಟಪೂರ್ವ ಸದಸ್ಯರಾಗಿದ್ದ ಸಚಿನ್ ಅಡಪ ಪ್ರಸಕ್ತ ಗ್ರಾಪಂನ ಸದಸ್ಯರಾಗಿದ್ದಾರೆ. ಕಾಂಗ್ರೆಸ್‌ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಇವರಿಬ್ಬರು ಇದೀಗ ಬಿಜೆಪಿ ಸೇರ್ಪಡೆಗೊಂಡು ಸ್ಥಳೀಯವಾಗಿ ಅಚ್ಚರಿ ಮೂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News