×
Ad

​ಜು.11: ವಿಸ್ಟಾಡೋಮ್ ರೈಲು ಸಂಚಾರಕ್ಕೆ ಚಾಲನೆ

Update: 2021-07-10 19:41 IST

ಮಂಗಳೂರು, ಜು.10: ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್ ಈ ಸಂದರ್ಭ ಗಣ್ಯ ಉಪಸ್ಥಿತರಿರುವರು.

ರೈಲ್ವೆ ಇಲಾಖೆಯಿಂದ ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ವಿಸ್ಟಾಡೋಮ್ ಬೋಗಿಗಳುಳ್ಳ ರೈಲುಗಳನ್ನು ಪರಿಚಯಿಸಲಾಗುತ್ತದೆ. ರೈಲಿನಲ್ಲಿ 2 ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಹೊಂದಿದೆ, ಅಗಲವಾದ, ದೊಡ್ಡ ಕಿಟಕಿಗಳ ಮೂಲಕ ಪ್ರಯಾಣಿಕರಿಗೆ ಪ್ರಕೃತಿಯ ಸೌಂದರ್ಯ ಸವಿಯಲು ಸಾಧ್ಯವಾಗಲಿದೆ ಎಂದು ರೈಲ್ವೆ ಇಲಾಖೆಯ ಪ್ರಕಟನೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News