×
Ad

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ

Update: 2021-07-10 20:21 IST

ಉಡುಪಿ, ಜು.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ. ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಆದಂತಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲಾತಿಗಳೊಂದಿೆ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0820-2536650/ 2525566 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News