×
Ad

ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಇಮ್ತಿಯಾಝ್ ತುಂಬೆ ಮರು ಆಯ್ಕೆ

Update: 2021-07-10 20:43 IST

ಬಂಟ್ವಾಳ, ಜು.10: ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಮುಹಮ್ಮದ್ ಇಮ್ತಿಯಾಝ್ ತುಂಬೆ ಎರಡನೇ ಬಾರಿಗೆ  ನೇಮಕಗೊಂಡಿದ್ದಾರೆ. 

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರ ನಿರ್ದೇಶನದಂತೆ, ಮುಡಿಪು ಬ್ಲಾಕ್ ಅಧ್ಯಕ್ಷ ಪ್ರಶಾಂತ್ ಖಾಜವ ಅವರ ಶಿಫಾರಸಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಅವರು ಮುಹಮ್ಮದ್ ಇಮ್ತಿಯಾಝ್ ತುಂಬೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.   

ಮಂಗಳೂರಿನ ಮಲ್ಲಿಕ್ಕಟ್ಟೆ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖ ನಾಯಕರ ಸಮ್ಮುಖದಲ್ಲಿ ಇಮ್ತಿಯಾಝ್ ತುಂಬೆ ಅವರು ಇಂದು ನೇಮಕಾತಿ ಆದೇಶ ಪತ್ರ ಸ್ವೀಕರಿಸಿದರು. ತುಂಬೆ ಗ್ರಾಮದ ನಿವಾಸಿಯಾಗಿರುವ ಮುಹಮ್ಮದ್ ಇಮ್ತಿಯಾಝ್ ತುಂಬೆ ಪದವೀಧರರಾಗಿದ್ದು ಮುಡಿಪು ಬ್ಲಾಕ್ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಅವರು ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ರಾಜಕೀಯದ ಜೊತೆ ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ಗುರುತಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News