ಕೊಡವರಿಗೆ ಬಂದೂಕು ಲೈಸನ್ಸ್ ಗೆ ವಿನಾಯಿತಿ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-07-11 14:32 GMT

ಬೆಂಗಳೂರು, ಜು.11: ಬ್ರಿಟಿಷರ ಕಾಲದಲ್ಲಿದ್ದ ನಿಯಮಗಳನ್ನೇ ಮುಂದುವರಿಸಿ ಕೊಡವರಿಗೆ ಬಂದೂಕು ಪರವಾನಿಗೆ ಪಡೆಯುವುದರಿಂದ ವಿನಾಯಿತಿ ನೀಡುತ್ತಿರುವುದನ್ನು ಪ್ರಶ್ನಿಸಿದ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಮಡಿಕೇರಿಯ ಗಾಳಿಬೀಡು ನಿವಾಸಿಯಾಗಿರುವ ನಿವೃತ್ತ ಸೇನಾಧಿಕಾರಿ ವೈ.ಕೆ.ಚೇತನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಅರ್ಜಿದಾರರ ಪರ ವಕೀಲರು, ಬಂದೂಕು ಲೈಸನ್ಸ್ ವಿನಾಯಿತಿ ನೀಡುವುದು ಅಸಂವಿಧಾನಿಕ. ಇದು ಜಾತಿ, ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದಂತಾಗುತ್ತದೆ. ಮೂಲತಃ ಕೊಡವ ಜನಾಂಗಕ್ಕೆ ಕತ್ತಿ, ಬಂದೂಕು ಹೊಂದುವುದು ಸಾಂಪ್ರದಾಯಿಕ ಹಕ್ಕಾಗಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News