ಮುರುಡೇಶ್ವರ: ಸಮುದ್ರದಲ್ಲಿ ಮುಳುಗಿ ಓರ್ವ ಮೃತ್ಯು
Update: 2021-07-11 21:57 IST
ಭಟ್ಕಳ, ಜು.11: ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ನಾಲ್ವರು ಪ್ರವಾಸಿಗರಲ್ಲಿ ಓರ್ವ ಸಮುದ್ರದ ಅಲೆಗೆ ಸಿಲುಕಿ ನೀರು ಪಾಲಾಗಿದ್ದು, ಇನ್ನೋರ್ವ ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾಸೂರು ಗ್ರಾಮದ ಯುವಕ ನೀರುಪಾಲಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದ್ದು, ಓರ್ವ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.