ಮಲೆಬೆನ್ನೂರು: ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Update: 2021-07-12 17:50 IST
ದಾವಣಗೆರೆ ಜು.12 : ಮಲೆಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಆತ್ಮ ನಿರ್ಭರ್ ಯೋಜನೆಯಡಿ 2ನೇ ಬಾರಿ ಸಾಲ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಬ್ಯಾಂಕಿನಿಂದ ರೂ. 10 ಸಾವಿರ ಸಾಲ ಪಡೆದು, ಪೂರ್ಣ ಪ್ರಮಾಣದಲ್ಲಿ ಮರುಪಾವತಿ ಮಾಡಿದ ವ್ಯಾಪಾರಿಗಳಿಗೆ ಮಾತ್ರ 2ನೇ ಬಾರಿ ರೂ. 20 ಸಾವಿರ ನೀಡಲಾಗುವುದು.
ಅರ್ಹ ಅರ್ಜಿದಾರರು ನಿಗದಿತ ಅವಧಿಯಲ್ಲಿ ಮೊದಲನೇ ಸಾಲ ಮರುಪಾವತಿ ಮಾಡಿರುವ ಬಗ್ಗೆ ಬ್ಯಾಂಕಿನಿಂದ ಪ್ರಮಾಣ ಪತ್ರ ಪಡೆದು, ಅರ್ಜಿಯನ್ನು ಆನ್ ಲೈನ್‍ನಲ್ಲಿ ಸಲ್ಲಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಕಚೇರಿಯ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.