ದ.ಕ. ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌ಗೆ 10 ಮಂದಿ ಬಲಿ, 126 ಮಂದಿಗೆ ಸೋಂಕು ದೃಢ

Update: 2021-07-12 14:24 GMT

ಮಂಗಳೂರು, ಜು.12: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ 126 ಪ್ರಕರಣಗಳು ಮಾತ್ರ ವರದಿಯಾಗಿವೆ. 10 ಮಂದಿ ಮೃತಪಟ್ಟಿದ್ದಾರೆ. 289 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.2.19ರಷ್ಟಿದೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 95,550ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 92,223 ಮಂದಿ ಗುಣಮುಖರಾಗಿದ್ದರೆ, ಒಟ್ಟು 1,325 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 2002 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಯಾವುದೇ ಬ್ಲಾಕ್ ಫಂಗಸ್ ಪ್ರಕರಣ ವರದಿಯಾಗಿಲ್ಲ.

ಇದುವರೆಗೆ ಒಟ್ಟು 80,099 ಮಾಸ್ಕ್ ಉಲ್ಲಂಘನೆ ಪ್ರಕರಣಗಳ ಪೈಕಿ 97,67,717 ರು. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News