ಆತಂಕದ ನಡುವೆ ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ

Update: 2021-07-12 15:06 GMT

ಬೆಂಗಳೂರು, ಜು.12: ಝಿಕಾ ವೈರಸ್ ಆತಂಕದಲ್ಲಿರುವ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಿಗೆ ಜು.12ರಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. 

ಬಸ್ ಸಂಚಾರ ಆರಂಭದಿಂದ ಜನರಿಗೆ ಒಂದೆಡೆ ನೆಮ್ಮದಿ ಮತ್ತೊಂದೆಡೆ ಆಂತಕ ಕಾಡುತ್ತಿದೆ. ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಸೇರಿ ಹಲವೆಡೆಯಿಂದ ಬಸ್‍ಗಳು ಸಂಚರಿಸಲಿವೆ. ಆದರೆ, ಕೇರಳದಲ್ಲಿ ಝಿಕಾ ಎಂಬ ಹೊಸ ರೋಗ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಅಥವಾ ಕೋವಿಡ್ ಮೊದಲ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ತರಬೇಕು ಎಂದು ಸೂಚಿಸಲಾಗಿದೆ. 

ಜು.12ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರಿನಿಂದ ಬಸ್ ಸಂಚಾರ ಆರಂಭಿಸಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿತ್ತು. ಶಿಕ್ಷಣ, ವ್ಯವಹಾರ ಇನ್ನಿತರೆ ಕಾರಣಕ್ಕೆ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರು 15 ದಿನಗಳಿಗೊಮ್ಮೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದು ಕೆಎಸ್ಸಾರ್ಟಿಸಿ ಸೂಚಿಸಿದೆ. ಜೊತೆಗೆ ಇತರ ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News