ಜುಲೈ 14ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2021-07-12 15:17 GMT

ಬೆಂಗಳೂರು, ಜು.12: ಬಂಗಾಲಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.14ರವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜು.13ರಂದು ಆರೆಂಜ್ ಹಾಗೂ ಜು.14ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಜು.14ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News