​ಬಸ್ ಟಿಕೆಟ್ ಹೆಚ್ಚುವರಿ ದರ ಪಡೆದರೆ ಬಸ್ ವಿರುದ್ಧ ಕ್ರಮ: ಆರ್‌ಟಿಒ

Update: 2021-07-12 17:37 GMT

ಮಂಗಳೂರು, ಜು.12: ಖಾಸಗಿ ಬಸ್ ಮಾಲಕರು ಟಿಕೆಟ್‌ಗೆ ಹೆಚ್ಚುವರಿ ದರ ಪಡೆದಲ್ಲಿ, ಬಸ್‌ನ ನೋಂದಣಿ ಸಂಖ್ಯೆ ಹಾಗೂ ರೂಟ್ ಮಾಹಿತಿಯನ್ನು ಲಿಖಿತವಾಗಿ, ಪುರಾವೆಯೊಂದಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗೆ ಸಲ್ಲಿಸಬೇಕು. ಅಂತಹ ವಾಹನಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಸರಕಾರದ ಅಧಿಸೂಚನೆಯ ಪ್ರಕಾರ ನಗರ ಮತ್ತು ಗ್ರಾಮಾಂತರ ಪ್ರಯಾಣ ದರ ನಿಗದಿಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. ಕೋವಿಡ್-19 ಅವಧಿಯಲ್ಲಿ ದ.ಕ. ಸಾರಿಗೆ ಪ್ರಾಧಿಕಾರವು ನಗರ ಮತ್ತು ಗ್ರಾಮಾಂತರ ಪ್ರಯಾಣ ದರ ಏರಿಕೆ ಮಾಡಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News