ಮುಂಡಾಜೆ: ರಸ್ತೆ ಬದಿಗೆ ಉರುಳಿಬಿದ್ದ ಲಾರಿ
Update: 2021-07-13 11:56 IST
ಬೆಳ್ತಂಗಡಿ, ಜು.13: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ಮುಂಡಾಜೆಯ ಸೀಟು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಚಿಕ್ಕಮಗಳೂರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಲಾರಿ ಸೀಟು ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕೂಡಲೇ ಧಾವಿಸಿ ಬಂದ ಸ್ಥಳೀಯರು ಗಾಯಾಳು ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅವರು ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.