ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ
Update: 2021-07-13 17:20 IST
ಬೆಂಗಳೂರು, ಜು.13: ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ವತಿಯಿಂದ ಜು.19 ಹಾಗೂ 22ರಂದು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಅನುಮತಿಸಲಾಗಿದೆ. ಈ ಕುರಿತು ಸಾರಿಗೆ ನಿಗಮದ ಎಲ್ಲ ಚಾಲಕ, ನಿರ್ವಾಹಕರುಗಳಿಗೆ ಸೂಕ್ತ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.