ಹೆಬ್ರಿ: ಜುಲೈ 14ರಂದು ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟನೆ
Update: 2021-07-13 20:27 IST
ಉಡುಪಿ, ಜು.13: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕೆಮಿಕಲ್ಸ್ ಅ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಮಂಗಳೂರು ಇವರ ಕೊಡುಗೆಯಿಂದ ನೂತನವಾಗಿ ನಿರ್ಮಾಣ ಗೊಂಡ ಆಮ್ಲಜನಕ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ಜುಲೈ 14ರಂದು ಬೆಳಗ್ಗೆ 11:00 ಗಂಟೆಗೆ ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಉದ್ಘಾಟಿಸಲಿದ್ದು, ಕಾರ್ಕಳ ಶಾಸಕ ಹಾಗೂ ವಿಧಾನಸಭೆಯ ಸರಕಾರಿ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.