×
Ad

ರಾಜ್ಯದಲ್ಲಿ ಜನಸಂಖ್ಯಾ ನೀತಿಗೆ ಸೂಕ್ತ ಸಮಯ: ಸಿ.ಟಿ.ರವಿ

Update: 2021-07-13 22:01 IST

ಬೆಂಗಳೂರು, ಜು.13: ದಿನೇ ದಿನೇ ಅಧಿಕಗೊಳ್ಳುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಕರ್ನಾಟಕಕ್ಕೆ ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹೀಗಾಗಿ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸಬೇಕು ಎಂದು ನುಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News