ಬೆಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯಿಂದ 301ನೇ ರಕ್ತದಾನ ಶಿಬಿರ
Update: 2021-07-13 23:29 IST
ಬೆಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ರಕ್ತದಾನ ಶಿಬಿರದಲ್ಲಿ 103 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಮೆಜೆಸ್ಟಿಕ್ ವಿಸ್ಡಂ ಮಸೀದಿ ಖತೀಬರಾದ ಶಾಫಿ ಸಅದಿ ರಕ್ತದಾನ ಮಾಡುವುದರ ಕಾರ್ಯಕ್ರಮ ಮೂಲಕ ಉದ್ಘಾಟಿಸಿದರು. ರೆಡ್ ಕ್ರಾಸ್ ಸಂಸ್ಥೆ ಬೆಂಗಳೂರಿನ ಮುಖ್ಯಸ್ಥೆ ರೇಶ್ಮಾ ರೈ ಬೆಂಗಳೂರು ಮಾತನಾಡಿ ರಕ್ತದಾನ ಶಿಬಿರಕ್ಕೆ ಶುಭ ಹಾರೈಸಿದರು.
ರಕ್ತದಾನ ಮಾಡಿದ ರಕ್ತದಾನಿಗಳಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರ) ಸಂಸ್ಥೆಯ ಉಪಾಧ್ಯಕ್ಷರಾದ ಅಶ್ರಫ್ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯನಿರ್ವಾಹಕರಾದ ಫಾರೂಕ್ ಬಿಗ್ ಗ್ಯಾರೇಜ್, ಇರ್ಶಾದ್ ಉಚ್ಚಿಲ,ನಿಝಾಮುದ್ದೀನ್ ಉಪ್ಪಿನಂಗಡಿ, ಇರ್ಫಾನ್ ಕಲ್ಲಡ್ಕ ಸದಸ್ಯರಾದ ರಫೀಕ್ ಪಾನೇಲ, ನೌಶಾದ್ ಮಂಜನಾಡಿ, ಸಾದಿಕ್ ಮುಡಿಪು ಉಪಸ್ಥಿತರಿದ್ದರು.