ಕೋವಿಡ್‍ನಿಂದ ಮಕ್ಕಳ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ: ಸಚಿವ ಆರ್. ಅಶೋಕ್

Update: 2021-07-14 11:52 GMT

ಬೆಂಗಳೂರು, ಜು. 14: `ಕೋವಿಡ್ ಸಂಭವನೀಯ ಮೂರನೆ ಅಲೆಯನ್ನು ನಿಭಾಯಿಸಲು ರಾಜ್ಯ ಸರಕಾರ ಸಜ್ಜಾಗಿದ್ದು, ಮಕ್ಕಳನ್ನ ಇದರಿಂದ ರಕ್ಷಿಸುವುದೇ ನಮ್ಮ ಪ್ರಥಮ ಆದ್ಯತೆಯಾಗಿದೆ' ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ್, `ತಜ್ಞರ ಶಿಫಾರಸುಗಳ ಆಧಾರದ ಮೇಲೆ, ನಾವು ಈಗಾಗಲೇ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಔಷಧಿಗಳನ್ನು ಸಂಗ್ರಹಿಸುವುದರ ಜೊತೆಗೆ ಮಕ್ಕಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ವೈದ್ಯರಿಗೆ ತರಬೇತಿ ನೀಡುತ್ತಿದ್ದು, ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ' ಎಂದರು.

`ಕೋವಿಡ್ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಕರ್ನಾಟಕದಲ್ಲಿ ನಿಯಂತ್ರಣದಲ್ಲಿರುವದಕ್ಕೆ ಕಾರಣ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರದ ಎಲ್ಲ ಸಚಿವರು ತಂಡವಾಗಿ ಕಾರ್ಯನಿರ್ವಹಿಸುತ್ತಿರುವದು. ನಾವು ಈಗಾಗಲೇ ಗಡಿ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿದ್ದೇವೆ ಮತ್ತು ಗಡಿ ತಪಾಸಣೆಯನ್ನು ಇನ್ನಷ್ಟು ತೀವ್ರಗೊಳಿಸುವ ಕುರಿತು ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇವೆ' ಎಂದು ಅವರು ಹೇಳಿದರು.

ಕೋವಿಡ್ ಸಮಯದಲ್ಲಿ ಜನರಿಗೆ ಸಹಾಯ ಮಾಡಿದ್ದಕ್ಕಾಗಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರನ್ನು ಶ್ಲಾಘಿಸಿದ ಅಶೋಕ್ `ಬೊಮ್ಮನಹಳ್ಳಿಯಲ್ಲಿ ಬಹುಪಾಲು ಆಹಾರ ಕಿಟ್‍ಗಳನ್ನು ಒದಗಿಸಲಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ, ಅಲ್ಲಿ ಅಂತಹ ಒಂದು ಲಕ್ಷಕ್ಕೂ ಹೆಚ್ಚು ಕಿಟ್‍ಗಳನ್ನು ವಿತರಿಸಲಾಗಿದೆ' ಎಂದು ಅವರು ಹೇಳಿದರು. `ಕಲ್ಲುಗಣಿ ಪ್ರದೇಶಗಳನ್ನು ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಎಂದು ಪರೀಕ್ಷಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವರು ಹೇಳಿದರು. 

`ಕ್ವಾರಿಗಳನ್ನು ತಪಾಸಣೆ ನಡೆಸಲು ನಾನು ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದೇನೆ. ಕೃಷ್ಣರಾಜ ಸಾಗರ್ ಅಣೆಕಟ್ಟಿಗೆ ತಾಂತ್ರಿಕ ತಜ್ಞರ ತಂಡವು ಜಲಾಶಯದಲ್ಲಿ ಯಾವುದೇ ಬಿರುಕುಗಳಿಲ್ಲ ಎಂದು ಸ್ಪಷ್ಟಪಡಿಸಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಡುವೆ ನಡೆಯುತ್ತಿರುವ ಮಾತಿನ ಯುದ್ಧ, ಮಂಡ್ಯದ ಚುನಾವಣಾ ಫಲಿತಾಂಶದಿಂದ ಹೊರಬಂದ ಅವರ ವೈಯಕ್ತಿಕ ಪೈಪೆÇೀಟಿಯ ಪರಿಣಾಮ' ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News