×
Ad

​ದ.ಕ. ಜಿಲ್ಲೆ : ಕೋವಿಡ್‌ಗೆ 6 ಬಲಿ; 219 ಮಂದಿಗೆ ಕೊರೋನ ಸೋಂಕು

Update: 2021-07-14 18:18 IST

ಮಂಗಳೂರು, ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 219 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ದ.ಕ. ಜಿಲ್ಲೆಯವರು ನಾಲ್ಕು ಮಂದಿ ಹೊರ ಜಿಲ್ಲೆಯವರು. 235 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.3.52ರಷ್ಟಿದೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 95,991ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 92,718 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 1340 ಮಂದಿ ಕೊರೋನದಿಂದ ಮೃತಪಟ್ಟಿದ್ದಾರೆ. ಪ್ರಸ್ತುತ 1933 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯ ಪುತ್ತೂರು ಮತ್ತು ಬಂಟ್ವಾಳ ತಾಲೂಕಿನ ತಲಾ ಒಂದು ಕಡೆ ಕಂಟೈನ್‌ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News