ವರ್ತಿಕಾ ಕಟಿಯಾರ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2021-07-14 16:12 GMT

ಬೆಂಗಳೂರು, ಜು.14: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ರಾಜ್ಯ ಅಪರಾಧ ದಾಖಲೆ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಅವರನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಆಂತರಿಕ ಭದ್ರತಾ ವಿಭಾಗ(ಕೇಂದ್ರ ಕಚೇರಿ)ದ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ಅವರನ್ನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News