ಜುಲೈ 16ರ ವರೆಗೆ ಕರ್ನಾಟಕ, ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

Update: 2021-07-15 18:24 GMT

ಹೊಸದಿಲ್ಲಿ, ಜು. 15: ಮುಂದಿನ ಎರಡು ದಿನಗಳ ಕಾಲ ಕೊಂಕಣ, ಗೋವಾ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪಶ್ಚಿಮ ಕರಾವಳಿ ಹಾಗೂ ದಕ್ಷಿಣ ಭಾರತದಲ್ಲಿ ಜುಲೈ 16ರಿಂದ ಮಳೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬುಲೆಟಿನ್ ತಿಳಿಸಿದೆ. ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದ ಒಳನಾಡಿನಲ್ಲಿ ಭಾರೀ ಮಳೆ ಹಾಗೂ ಇತರ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಜುಲೈ 16ರ ವರೆಗೆ ಮುಂದುವರಿಯಲಿದೆ ಎಂದು ಅದು ತಿಳಿಸಿದೆ. ಹರ್ಯಾಣ, ರಾಜಸ್ಥಾನ, ಉತ್ತರಪ್ರದೇಶ, ಪಂಜಾಬ್ ಹಾಗೂ ಮಧ್ಯಪ್ರದೇಶದಲ್ಲಿ ಜುಲೈ 17 ಹಾಗೂ 19ರ ನಡುವೆ ಮಳೆ ಸುರಿಯಲಿದೆ. ಇದೇ ಅವಧಿಯಲ್ಲಿ ಈಶಾನ್ಯ ಭಾರತದಲ್ಲಿ ಕೂಡ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News