ಮಲೆನಾಡಿನಲ್ಲಿ ಮುಂದುವರಿದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
Update: 2021-07-16 12:09 IST
ಚಿಕ್ಕಮಗಳೂರು, ಜು.16: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕುಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗ-ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.
ಕಳಸದ ಹೆಬ್ಬಾಳೆ ಸೇತುವೆ ಮುಳುಗುವ ಭೀತಿ ಎದುರಾಗಿದೆ. ಸೇತುವೆ ಮಟ್ಟದಿಂದ ಬರೀ ಎರಡು ಅಡಿ ಕೆಳಗೆ ನೀರು ಹರಿಯುತ್ತಿದೆ.
ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೇಮಾವತಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆಯಾಗಿದೆ. ಹಳ್ಳಕೊಳ್ಳಗಳು ಉಕ್ಕಿಹರಿಯುತ್ತಿವೆ.