×
Ad

ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಗಡಿಪಾರಿಗೆ ನಿರ್ಧಾರ: ಉನ್ನತ ಮಟ್ಟದ ಸಮಿತಿ ರಚನೆ

Update: 2021-07-16 19:47 IST

ಬೆಂಗಳೂರು, ಜು.16: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಉದ್ದೇಶದೊಂದಿಗೆ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. 

ರಾಜ್ಯದಲ್ಲಿ ನಾಪತ್ತೆಯಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಈ ಸಮಿತಿ ಕಾರ್ಯೋನ್ಮುಖವಾಗಲಿದೆ.  ಪತ್ತೆಯಾಗುವ ಅಕ್ರಮ ವಿದೇಶಿಗರು ಯಾವ ದೇಶದವರು ಎಂಬು ಪತ್ತೆ ಮಾಡಿ ಆ ದೇಶಕ್ಕೆ ಅವರನ್ನು ಗಡಿಪಾರು ಮಾಡಲು ಕ್ರಮವಹಿಸಲಾಗುವುದು. ಈ ಪತ್ತೆ ಕಾರ್ಯಕ್ಕೆ ವಿದೇಶಿ  ನೋಂದಣಾಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕಾಗುತ್ತದೆ.  ಈ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂದೇಶ ರವಾನಿಸಲಾಗುವುದು ಎಂದು ಗೃಹ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ. 

ಪ್ರತಿ ತಿಂಗಳು ಪತ್ತೆಯಾದ ಮತ್ತು ಗಡಿಪಾರು ಮಾಡಲಾಗಿರುವ ವಿದೇಶಿ ಪ್ರಜೆಗಳ ಕುರಿತು ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಲಾಗುವುದು. 

ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.  ಪ್ರಾದೇಶಿಕ ವಿದೇಶಿ ನೊಂದಣಾಧಿಕಾರಿ, ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರು,  ಸಂಬಂಧಪಟ್ಟ ಜಿಲ್ಲಾ ಪೊಲೀಸ್ ಅಧೀಕ್ಷಕರು,  ಎನ್ಐಸಿ ಸಮಿತಿಯ ಸದಸ್ಯರಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News