ರಮೇಶ್ ಜಾರಕಿಹೊಳಿ ಅಶ್ಲೀಲ ಸೀಡಿ ಪ್ರಕರಣ: ಜು.20ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Update: 2021-07-16 21:28 IST
ಬೆಂಗಳೂರು, ಜು.16: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸೀಡಿ ಪ್ರಕರಣಕ್ಕೆ ಸಂಬಂಧ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜು.20ಕ್ಕೆ ಮುಂದೂಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸೀಡಿ ಪ್ರಕರಣದ ವಿಚಾರಣೆಗೂ ಮುನ್ನ ತನಿಖಾ ವರದಿ ಅಗತ್ಯವಿದೆ. ಹೀಗಾಗಿ, ಪ್ರಕರಣ ಸಂಬಂಧ ದಾಖಲಾದ ಎಲ್ಲ ಎಫ್‍ಐಆರ್‍ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವಂತೆ ಅಡ್ವೊಕೇಟ್ ಜನರಲ್‍ಗೆ ನ್ಯಾಯಪೀಠವು ಸೂಚಿಸಿದೆ. ವಿಚಾರಣೆಯನ್ನು ಜು.20ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಇದೇ ವೇಳೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಹಾಗೂ ಅಲ್ಲಿವರೆಗೆ ದೂರು ಮುಕ್ತಾಯಗೊಳಿಸುವುದಿಲ್ಲ ಎಂದು ನೀಡಿರುವ ಭರವಸೆಯಂತೆ ಸರಕಾರ ನಡೆದುಕೊಳ್ಳಬೇಕು ಎಂದು ನ್ಯಾಯಪೀಠವು ಸೂಚಿಸಿತು.