ಬೆಂಗಳೂರು: ಗಾಂಜಾ ಮಾರಾಟ; ಆರೋಪಿ ಸೆರೆ
Update: 2021-07-16 21:39 IST
ಬೆಂಗಳೂರು, ಜು.16: ಮಾದಕ ವಸ್ತು ಗಾಂಜಾ ಮಾರಾಟ ಆರೋಪ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿರುವ ಇಲ್ಲಿನ ಕೋಣನಕುಂಟೆ ಠಾಣಾ ಪೊಲೀಸರು, ಅಪಾರ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಸೇಮಂತ, ಸಿದಾರಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಕಾರಿನಲ್ಲಿ ಸುಮಾರು 41 ಕೆ.ಜಿ ಮತ್ತು ಲಾಡ್ಜ್‍ನಲ್ಲಿ ಇರಿಸಿದ್ದ 93 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಬಲರಾಜು ಪತ್ತೆಗೆ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂದಿಂದ ಗಾಂಜಾ ತಂದು ನಗರದಲ್ಲಿ ಮಾರಟ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.