ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಆರಂಭಿಸಲು ಅನುಮತಿ: ಸಚಿವ ಡಾ.ಕೆ.ಸುಧಾಕರ್

Update: 2021-07-16 16:25 GMT

ಬೆಂಗಳೂರು, ಜು.16: ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಕೊರೋನ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು ಹಾಜರಾತಿಗೆ ಅವಕಾಶ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಸಂಬಂಧ ಸರಕಾರಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News