×
Ad

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಶರದ್ ಪವಾರ್

Update: 2021-07-17 12:47 IST
Photo: twitter.com/PMOIndia

ಹೊಸದಿಲ್ಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಇಬ್ಬರು ನಾಯಕರು  ಸುಮಾರು 50 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

"ರಾಜ್ಯಸಭಾ ಸಂಸದ  ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು ಉಭಯ ನಾಯಕರ ಭೇಟಿಯ ಫೋಟೋದೊಂದಿಗೆ  ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಪವಾರ್ ತಾನು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಲ್ಲ ಎಂದು ನಿರಾಕರಿಸಿದ ಕೆಲವೇ ದಿನಗಳಲ್ಲಿ ಈ ಭೇಟಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News