ಪಂಪ್‌ವೆಲ್‌ನಲ್ಲಿ ಕೃತಕ ನೆರೆ ಮಾಧ್ಯಮ ಸೃಷ್ಟಿ ಎಂದ ರಾ.ಹೆ.ಪ್ರಾಧಿಕಾರದ ಇಂಜಿನಿಯರ್ ಶಿಶುಮೋಹನ್ !

Update: 2021-07-17 10:48 GMT

ಮಂಗಳೂರು : ಪಂಪ್‌ವೆಲ್, ಕೊಟ್ಟಾರ ಚೌಕಿ ಹಾಗೂ ತೊಕ್ಕೊಟ್ಟು ಮೇಲ್ಸೇತುವೆ ತಳಭಾಗದಲ್ಲಿ ಮಳೆಯ ಸಂದರ್ಭ ಕೃತಕ ನೆರೆ ಸೃಷ್ಟಿಯಾ ಗುತ್ತಿರುವ ಬಗ್ಗೆ ದೂರು ಬರುತ್ತಿರುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ರಾ.ಹೆ.ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್, ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಎಂದರು.

ಈ ಸಂದರ್ಭ ಜಿಲ್ಲಾಧಿಕಾರಿ ಮಾತನಾಡಿ, ಕೊಟ್ಟಾರ ಚೌಕಿ, ಪಂಪ್‌ವೆಲ್ ಹಾಗೂ ತೊಕ್ಕೊಟ್ಟು ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುವ ಕುರಿತಂತೆ ಸ್ಥಳೀಯಾಡಳಿತ ನೋಡಲ್ ಅಧಿಕಾರಿಗಳನ್ನು ನೇಮಿಸಿ ಪರಿಶೀಲನೆ ನಡೆಸಿ ವರದಿ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ  ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News