ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ: ಸಿಎಫ್‌ಐ

Update: 2021-07-17 12:34 GMT

ಉಡುಪಿ, ಜು.17: ಉಡುಪಿ ಜಿಲ್ಲೆಗೆ ಬೇಕಾಗಿರುವುದು ಪರಿಪೂರ್ಣವಾಗಿ ಸರಕಾರದ ಅಧೀನದಲ್ಲಿರುವ ವೈದ್ಯಕೀಯ ಕಾಲೇಜು ಹೊರತು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳುವ ಖಾಸಗಿ ಸಹಭಾಗಿತ್ವದ ಕಾಲೇಜು ಅಲ್ಲ ಎಂದು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ನೇತೃತ್ವದಲ್ಲಿ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರದ ಮೇಲೆ ಒತ್ತಡ ಉಂಟಾಗಿದ್ದು, ಅದರಂತೆ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಈ ವರ್ಷದ ವೇಳೆಗೆ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವರು ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಸ್ಥಾಪಿಸುವ ಕುರಿತು ಹೇಳಿರುವುದು ಆಕ್ಷೇಪಾರ್ಹ ಎಂದು ಜಿಲ್ಲಾಧ್ಯಕ್ಷ ಅಸೀಲ್ ತಿಳಿಸಿದ್ದಾರೆ.

ಜಿಲ್ಲೆಯ ಜನರ ಬೇಡಿಕೆಯ ಅನುಸಾರವಾಗಿ ಪರಿಪೂರ್ಣವಾದ ಸರಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಬೇಕು. ನಮ್ಮ ಬೇಡಿಕೆ ಈಡೇರಿಸು ವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಮತ್ತು ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜನ್ನು ಒಪ್ಪಲು ಆಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News